Sunday, August 16, 2026
Homeನಿಮ್ಮ ಜಿಲ್ಲೆಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾರವಾರ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉತ್ತರ ಕನ್ನಡ, ಕಾರವಾರ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 13 ಆದೇಶ-ಜಾರಿಕಾರರು ಹಾಗೂ 65 ಜವಾನ ಹುದ್ದೆಗಳು ಸೇರಿದಂತೆ ಒಟ್ಟು 78 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆ.17ರಿಂದ ಸೆ.16ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ನ ನೇಮಕಾತಿ ವಿಭಾಗದಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವರ್ಗೀಕರಣ, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ ಹಾಗೂ ಇತರೆ ನೇಮಕಾತಿ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ.

“ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯ – ನೇಮಕಾತಿ ಮಾಹಿತಿ” (https://uttarakannada.dcourts.gov.in/notice-category/recruitments/)

ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments