Thursday, October 15, 2026
Homeನಿಮ್ಮ ಜಿಲ್ಲೆಬೆಳ್ಳಂಬೆಳಗ್ಗೆ ವಿಮಾನ ತುರ್ತು ಭೂಸ್ಪರ್ಶ..! ತೊಗರಿ ಹೊಲದಲ್ಲಿ ಸೇಫ್ ಲ್ಯಾಂಡಿಂಗ್,

ಬೆಳ್ಳಂಬೆಳಗ್ಗೆ ವಿಮಾನ ತುರ್ತು ಭೂಸ್ಪರ್ಶ..! ತೊಗರಿ ಹೊಲದಲ್ಲಿ ಸೇಫ್ ಲ್ಯಾಂಡಿಂಗ್,

ಕಲಬುರಗಿ: ತಾಂತ್ರಿಕ ದೋಷದಿಂದ ತರಬೇತಿ ವಿಮಾನವೊಂದು ರೈತರ ಜಮೀನಿನ ತೊಗರಿ ಹೊಲದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಸುರಕ್ಷಿತವಾಗಿ ವಿಮಾನವನ್ನು ಲ್ಯಾಂಡ್ ಮಾಡಿದ್ದು, ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ತಪ್ಪಿದೆ.

ವಿಮಾನ ನಿಲ್ದಾಣದ ಸಮೀಪದಲ್ಲೇ ಈ ಘಟನೆ ನಡೆದಿದ್ದು, ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಬ್ಬಂದಿ ತಕ್ಷಣವೇ ತುರ್ತು ಭೂಸ್ಪರ್ಶಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಪರಿಣಾಮವಾಗಿ ವಿಮಾನವು ತೊಗರಿ ಹೊಲದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.

ಘಟನೆ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ವಿವಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ವಿಮಾನದಲ್ಲಿ ಇಬ್ಬರು ಸಿಬ್ಬಂದಿ ಇದ್ದು, ಇಬ್ಬರೂ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ತಾಂತ್ರಿಕ ದೋಷವೇ ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ತಿಳಿದುಬರಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments