Tuesday, October 27, 2026
Homeನಿಮ್ಮ ಜಿಲ್ಲೆಶಿಕ್ಷಕರು, ಪದವೀಧರರಿಗೆ ಅನುಕೂಲ ಮಾಡಿದ್ದು ಬಿಜೆಪಿ–ಜೆಡಿಎಸ್ ಸರ್ಕಾರಗಳು: ಅಶ್ವತ್ಥ್ ನಾರಾಯಣ

ಶಿಕ್ಷಕರು, ಪದವೀಧರರಿಗೆ ಅನುಕೂಲ ಮಾಡಿದ್ದು ಬಿಜೆಪಿ–ಜೆಡಿಎಸ್ ಸರ್ಕಾರಗಳು: ಅಶ್ವತ್ಥ್ ನಾರಾಯಣ

ಬೆಂಗಳೂರು, ಅಕ್ಟೋಬರ್ 18: ಶಿಕ್ಷಕರು ಮತ್ತು ಪದವೀಧರರ ಹಿತಕ್ಕಾಗಿ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದ್ದು ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರಗಳೇ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಮಲ್ಲೇಶ್ವರದ ಜಗನ್ನಾಥ ಭವನದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನೆಗುದಿಗೆ ಬಿದ್ದಿದ್ದ ಕುಮಾರ ನಾಯಕ್ ಸಮಿತಿ ವರದಿಯನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿತ್ತು ಎಂದು ಹೇಳಿದರು. ಈ ವರದಿ ಅನುಷ್ಠಾನಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಹೋರಾಟ ನಡೆಸಿದ್ದರು ಎಂದು ತಿಳಿಸಿದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜೆಒಸಿ ಅಭ್ಯರ್ಥಿಗಳಿಗೆ ಖಾಯಂ ಉದ್ಯೋಗ ನೀಡುವಂತೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸರ್ಕಾರದ ಗಮನ ಸೆಳೆದಿದ್ದರು. ಅದರ ಫಲವಾಗಿ ತಾತ್ಕಾಲಿಕ ಉದ್ಯೋಗದಲ್ಲಿದ್ದ ಹಲವರನ್ನು ಶಾಶ್ವತ ನೇಮಕಾತಿ ಮಾಡಲಾಗಿತ್ತು ಎಂದು ಅವರು ಹೇಳಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅವಧಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗಿತ್ತು. ಈ ಶಾಲೆಗಳು ಈಗಲೂ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದರ ಜೊತೆಗೆ ಉದ್ಯೋಗಾವಕಾಶಗಳನ್ನೂ ಸೃಷ್ಟಿಸಿವೆ ಎಂದು ಅಶ್ವತ್ಥ್ ನಾರಾಯಣ ಹೇಳಿದರು.

ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿದ್ದ 140 ಪ್ರಥಮ ದರ್ಜೆ ಕಾಲೇಜುಗಳ ಜೊತೆಗೆ ಹೊಸದಾಗಿ 41 ಕಾಲೇಜುಗಳ ಆರಂಭಕ್ಕೆ ಅನುದಾನ ಬಿಡುಗಡೆ ಮಾಡಲಾಗಿತ್ತು. ಬಳಿಕ ಕಟ್ಟಡ ನಿರ್ಮಾಣ ಹಾಗೂ ಸಿಬ್ಬಂದಿ ನೇಮಕಾತಿಯೂ ನಡೆದಿದ್ದು, ಇವೆಲ್ಲವೂ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರಗಳ ಸಾಧನೆಗಳಾಗಿವೆ ಎಂದು ಅವರು ಪ್ರತಿಪಾದಿಸಿದರು.

ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿದ್ದು ಬಿಜೆಪಿ ಸರ್ಕಾರವೇ. ಅವರ ವೇತನ ತಾರತಮ್ಯವನ್ನು ಸರಿಪಡಿಸಲಾಗಿದ್ದು, ಹಲವು ವರ್ಷಗಳ ಸೇವೆ ಸಲ್ಲಿಸಿದ ಶಿಕ್ಷಕರ ಸೇವೆಯನ್ನು ಪರಿಗಣಿಸಿ ಮುಖ್ಯ ಶಿಕ್ಷಕರಾಗಿ ನೇಮಕ ಮಾಡಲಾಗಿದೆ ಎಂದು ಅವರು ಹೇಳಿದರು.

ಶಿಕ್ಷಕರು ಮತ್ತು ಪದವೀಧರರ ಪರವಾಗಿ ಬಿಜೆಪಿ–ಜೆಡಿಎಸ್ ಸರ್ಕಾರಗಳು ಕೈಗೊಂಡಿರುವ ಇಂತಹ ಕ್ರಮಗಳನ್ನು ಮತದಾರರು ಪರಿಗಣಿಸಬೇಕು. ಈ ಹಿನ್ನೆಲೆಯಲ್ಲಿ ಮುಂಬರುವ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕೆಂದು ಅಶ್ವತ್ಥ್ ನಾರಾಯಣ ಮನವಿ ಮಾಡಿಕಂಡರು.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments