Thursday, October 15, 2026
Homeನಿಮ್ಮ ಜಿಲ್ಲೆಹಾಬಲಕಟ್ಟಿ ಗ್ರಾಮದ ನೈಜ ಭೋವಿಗಳಿಗೆ ಜಾತಿ ಪ್ರಮಾಣಪತ್ರ ನೀಡಲು ಆಗ್ರಹಿಸಿ ಆಮರಣ ಉಪವಾಸ ಸತ್ಯಾಗ್ರಹಹೋರಾಟದಲ್ಲಿ ಪಾಲ್ಗೊಂಡು...

ಹಾಬಲಕಟ್ಟಿ ಗ್ರಾಮದ ನೈಜ ಭೋವಿಗಳಿಗೆ ಜಾತಿ ಪ್ರಮಾಣಪತ್ರ ನೀಡಲು ಆಗ್ರಹಿಸಿ ಆಮರಣ ಉಪವಾಸ ಸತ್ಯಾಗ್ರಹಹೋರಾಟದಲ್ಲಿ ಪಾಲ್ಗೊಂಡು ಸರ್ಕಾರಕ್ಕೆ ಮನವಿ ಸಲ್ಲಿಸಿದ ಕರ್ನಾಟಕ ಭೋವಿ ಸಮಾಜ ವಿಕಾಸ ಸಂಘದ ರಾಜ್ಯಾಧ್ಯಕ್ಷ ಕೇಶವ್ ರಾಜಪ್ಪ ಭೋವಿ

ಕುಷ್ಟಗಿ, ಅಕ್ಟೋಬರ್ 9: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಾಬಲಕಟ್ಟಿ ಗ್ರಾಮದ ನೈಜ ಭೋವಿ ಸಮುದಾಯದ ಜನರಿಗೆ ಜಾತಿ ಪ್ರಮಾಣಪತ್ರಗಳನ್ನು ನೀಡುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಸಮಾಜದ ಸದಸ್ಯರು ನಡೆಸುತ್ತಿರುವ ಆಮರಣ ಉಪವಾಸ ಸತ್ಯಾಗ್ರಹ ತೀವ್ರಗೊಂಡಿದೆ.

ಸತ್ಯಾಗ್ರಹ ನಡೆಯುತ್ತಿರುವ ಸ್ಥಳಕ್ಕೆ ಕರ್ನಾಟಕ ಭೋವಿ ಸಮಾಜ ವಿಕಾಸ ಸಂಘದ ರಾಜ್ಯಾಧ್ಯಕ್ಷ ಕೇಶವ್ ರಾಜಪ್ಪ ಭೋವಿ ಭೇಟಿ ನೀಡಿ, ಪ್ರತಿಭಟನಾನಿರತರೊಂದಿಗೆ ಸತ್ಯಾಗ್ರಹದಲ್ಲಿ ಪಾಲ್ಗೊಂಡರು. ಬಳಿಕ ಕುಷ್ಟಗಿ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಅಧಿಕೃತ ಮನವಿ ಸಲ್ಲಿಸಿ, ನೈಜ ಭೋವಿ ಸಮುದಾಯದ ಅರ್ಹ ಫಲಾನುಭವಿಗಳಿಗೆ ತಕ್ಷಣ ಜಾತಿ ಪ್ರಮಾಣಪತ್ರಗಳನ್ನು ನೀಡುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೇಶವ್ ರಾಜಪ್ಪ ಭೋವಿ, ನೈಜ ಭೋವಿ ಸಮುದಾಯದ ಜನರಿಗೆ ಸಿಗಬೇಕಾದ ಮೂಲಭೂತ ಹಕ್ಕುಗಳ ಭಾಗವಾಗಿರುವ ಜಾತಿ ಪ್ರಮಾಣಪತ್ರವನ್ನು ವಿಳಂಬ ಮಾಡುತ್ತಿರುವುದು ಬೇಸರದ ಸಂಗತಿಯಾಗಿದೆ. ಅರ್ಹರಿಗೆ ನ್ಯಾಯ ಒದಗಿಸುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸದೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸದಿದ್ದರೆ ಹೋರಾಟವನ್ನು ರಾಜ್ಯಾದ್ಯಂತ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಉಪವಾಸ ಸತ್ಯಾಗ್ರಹದಲ್ಲಿ ಸಮಾಜದ ಪ್ರಮುಖರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಭೋವಿ ಸಮಾಜದ ಬಾಂಧವರು ಭಾಗವಹಿಸಿದ್ದರು. ನ್ಯಾಯ ಸಿಗುವವರೆಗೆ ಹೋರಾಟವನ್ನು ಮುಂದುವರಿಸುವುದಾಗಿ ಪ್ರತಿಭಟನಾಕಾರರು ಸಂಕಲ್ಪ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments