Tuesday, February 17, 2026
HomeUncategorizedಲಿಂಗಸುಗೂರಿನಲ್ಲಿ 140ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

ಲಿಂಗಸುಗೂರಿನಲ್ಲಿ 140ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

ಲಿಂಗಸುಗೂರು:
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 140ನೇ ಸಂಸ್ಥಾಪನಾ ದಿನಾಚರಣೆಯನ್ನು ಲಿಂಗಸುಗೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಶರಣಗೌಡ ಪಾಟೀಲ್ ಬಯ್ಯಾಪುರ ಸಾಹೇಬರು ನೇತೃತ್ವ ವಹಿಸಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು, ರಾಷ್ಟ್ರದ ಏಕತೆ, ಅಖಂಡತೆ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಕಾಂಗ್ರೆಸ್ ಪಕ್ಷದ ಎಲ್ಲಾ ಹಿರಿಯ ನಾಯಕರು ಮತ್ತು ಮಹಾನ್ ತ್ಯಾಗಿಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಕಾಂಗ್ರೆಸ್ ಪಕ್ಷವು ದೇಶದ ಪ್ರಜಾಪ್ರಭುತ್ವದ ರಕ್ಷಣೆಗೆ ಹಾಗೂ ಸಾಮಾಜಿಕ ನ್ಯಾಯದ ಅನುಷ್ಠಾನಕ್ಕೆ ನೀಡಿರುವ ಕೊಡುಗೆಗಳನ್ನು ನಾಯಕರು ತಮ್ಮ ಭಾಷಣದಲ್ಲಿ ಸ್ಮರಿಸಿದರು.
ಈ ಕಾರ್ಯಕ್ರಮದಲ್ಲಿ ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾದ ಭೂಪನಗೌಡ ಪಾಟೀಲ ಕರಡಕಲ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷರಾದ ಪಾಮಯ್ಯ ಮುರಾರಿ, ಗುಂಡಪ್ಪ ನಾಯಕ್, ಸೋಮಶೇಖರ್ ಐದನಾಳ, ಪ್ರಮೋದ ಕುಲ್ಕರ್ಣಿ, ಶರಣಬಸವ ವಾರದ, ಶಿವನಗೌಡ ವಂದಲ್ಲಿ, ಅನಿಷ್ ಪಾಷಾ, ಅಮರೇಶ ಮೆದಲಾಪುರ, ವೆಂಕಟೇಶ ಕಳ್ಳಿಲಿಂಗಸುಗೂರು, ನಾಗರಾಜ್ ಕುಪ್ಪಣ್ಣ, ಲಾಲಪ್ಪ ರಾಠೋಡ, ಜಗದೀಶ ಪಾಟೀಲ್, ಪ್ರಕಾಶ್ ಕುರಿ, ಶಿವಾಜಿ ಕಟ್ಟಿಮನಿ, ಶರಣಪ್ಪ ಹುನುಕುಂಟಿ, ಮೋಹನ್ ಗೋಸ್ಲೆ ಕರಡಕಲ್, ಮೌನೇಶ ತೊಪ್ಪಲ್ ದೊಡ್ಡಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments