Tuesday, February 17, 2026
Homeನಿಮ್ಮ ಜಿಲ್ಲೆಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು 6 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಂದ ಅಪ್ಪ!

ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು 6 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಂದ ಅಪ್ಪ!


ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರದ ವ್ಯಕ್ತಿಯೊಬ್ಬ ತನ್ನ 6 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ನಿಜಾಮಾಬಾದ್ ನಲ್ಲಿ ನಡೆದಿದೆ.

ಈತ ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೆರೂರ್ ಗ್ರಾಮದ ನಿವಾಸಿಯಾಗಿದ್ದಾನೆ. ಆರೋಪಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.

ನಿಜಾಮಾಬಾದ್ ಪೊಲೀಸರು ಪ್ರಕರಣದ ಆರೋಪಿ ಪಾಂಡುರಂಗ ಮತ್ತು ಗ್ರಾಮದ ಸರಪಂಚ್ ಗಣೇಶ್ ರಾಮಚಂದ್ರ ಶಿಂಧೆಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಿಜಾಮಾಬಾದ್ ಪೊಲೀಸ್ ಆಯುಕ್ತ ಪಿ. ಸಾಯಿ ಚೈತನ್ಯ, ಕೆಲವು ದಿನಗಳ ಹಿಂದೆ ಯೆಡಪಲ್ಲಿಯ ನಿಜಾಮ ಸಾಗರ್ ಕಾಲುವೆಯಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು.

ಪೊಲೀಸರು ಆಕೆಯ ತಂದೆಯನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಆಕೆ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿ ಪೊಲೀಸರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದ. ತನಿಖಾಧಿಕಾರಿ ವಿಚಾರಣೆ ನಡೆಸಿದಾಗ, ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.ಹತ್

ಗ್ರಾಮದಲ್ಲಿ ಸೆಲೂನ್ ನಡೆಸುತ್ತಿದ್ದ ಪಾಂಡುರಂಗ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸಿದ್ದ. ಅವನಿಗೆ ಮೂರು ವರ್ಷದ ಗಂಡು ಮಗು ಮತ್ತು ಆರು ವರ್ಷದ ಅವಳಿ ಹೆಣ್ಣು ಮಕ್ಕಳಿದ್ದರು. ಇದರಿಂದ ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡು ಮಕ್ಕಳ ನಿಯಮ ಇರುವುದರಿಂದ ಸ್ಪರ್ಧಿಸಲು ಅನರ್ಹನಾಗಿದ್ದ.

ಈ ವಿಚಾರವನ್ನು ಸ್ನೇಹಿತ ಮತ್ತು ಗ್ರಾಮದ ಪ್ರಸ್ತುತ ಸರಪಂಚ್ ಗಣೇಶ್ ಶಿಂಧೆ ಜೊತೆ ಚರ್ಚಿಸಿ ಅವಳಿ ಮಕ್ಕಳಲ್ಲಿ ಹಿರಿಯಳಾದ ಪ್ರಾಚಿಯನ್ನು ಎಲ್ಲಾದರೂ ಬಿಟ್ಟು ಬರಲು ಯೋಚಿಸಿದ್ದ. ಬಳಿಕ ಅವಳು ವಾಪಸ್‌ ಬಂದರೆ ತೊಂದರೆ ಆಗುತ್ತದೆ ಎಂದು ಕಾಲುವೆಗೆ ತಳ್ಳಿ ಆಕಸ್ಮಿಕ ಸಾವು ಎಂದು ಬಿಂಬಿಸಲು ಯತ್ನಿಸಿದ್ದ.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments