Thursday, October 29, 2026
Homeನಿಮ್ಮ ಜಿಲ್ಲೆಕ್ರೀಡಾ ಸಾಧಕ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ: ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಅಭಿನಂದನೆ

ಕ್ರೀಡಾ ಸಾಧಕ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ: ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಅಭಿನಂದನೆ

ಮುದ್ದೇಬಿಹಾಳ: ಕರ್ನಾಟಕ ಮಾಧ್ಯಮ ಒಕ್ಕೂಟ (ರಿ.) ಸಂಘಟನೆಯ ವತಿಯಿಂದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕು ಘಟಕಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪತ್ರಕರ್ತ ದಿ. ನಾಗರಾಜ ಬಿ. ಜಮಖಂಡಿ ಅವರ ಸ್ಮರಣಾರ್ಥ ನಡೆಯುವ ಕಾರ್ಯಕ್ರಮದಲ್ಲಿ ಕ್ರೀಡಾ ಸಾಧನೆಗೈದ ವಿದ್ಯಾರ್ಥಿಗಳಾದ ಕುಮಾರ ವಿಕ್ರಾಂತ ಶಾರದಳ್ಳಿ (ಸ್ಕೇಟಿಂಗ್) ಹಾಗೂ ಕುಮಾರಿ ಶಕುಂತಲಾ ಶಾರದಳ್ಳಿ (ಕರಾಟೆ) ಅವರನ್ನು ವಿಶೇಷ ಸನ್ಮಾನಿತರನ್ನಾಗಿ ಪರಿಗಣಿಸಲಾಗಿದೆ.
ದಿನಾಂಕ 25-10-2026ರ ಭಾನುವಾರದಂದು ನಡೆಯಲಿರುವ ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಮಾಧ್ಯಮ ರತ್ನ, ಮಾಧ್ಯಮ ಸಾಧಕ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡುವುದರ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತಿದೆ.
ವಿದ್ಯಾರ್ಥಿಗಳ ಕ್ರೀಡಾ ಸಾಧನೆಯನ್ನು ಗುರುತಿಸಿ ವಿಶೇಷ ಸನ್ಮಾನಕ್ಕೆ ಆಯ್ಕೆ ಮಾಡಿರುವುದಕ್ಕೆ ರಾಜ್ಯ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಸರ್ವ ಪದಾಧಿಕಾರಿಗಳು ಮತ್ತು ಏಕಲವ್ಯ ರೋಲರ್ ಸ್ಕೇಟಿಂಗ್ ಅಕ್ಯಾಡೆಮಿ
ವತಿಯಿಂದ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments