Thursday, October 15, 2026
Homeನಿಮ್ಮ ಜಿಲ್ಲೆಅಪಘಾತ ಸ್ಥಳ ಪರಿಶೀಲಿಸಿದ ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು

ಅಪಘಾತ ಸ್ಥಳ ಪರಿಶೀಲಿಸಿದ ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು

ಅಪಘಾತ ವಲಯಗಳಲ್ಲಿ ಸುರಕ್ಷತಾ ಫಲಕ ಅಳವಡಿಕೆ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲು ಸೂಚನೆ

ಕಲಬುರಗಿ: ಜಿಲ್ಲೆಯ ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯ ರಂಜೋಳ್–ಮದನಾ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಅಡ್ಡೂರು ಶ್ರೀನಿವಾಸುಲು, IPS ಅವರು ಅಕ್ಟೋಬರ್ 6ರಂದು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಪಘಾತ ನಡೆದ ಸ್ಥಳದ ರಸ್ತೆ ಪರಿಸ್ಥಿತಿ ಹಾಗೂ ಸಂಚಾರ ವ್ಯವಸ್ಥೆಯನ್ನು ಪರಿಶೀಲಿಸಿದ ಪೊಲೀಸ್ ಅಧೀಕ್ಷಕರು, ಇಂತಹ ಅಪಘಾತ ವಲಯಗಳಲ್ಲಿ ವಾಹನ ಸವಾರರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ವಿಶೇಷವಾಗಿ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ರಸ್ತೆ ಸುರಕ್ಷತಾ ನಿಯಮಗಳು, ವೇಗ ನಿಯಂತ್ರಣ, ಎಚ್ಚರಿಕೆ ಹಾಗೂ ಇತರ ಅಗತ್ಯ ಸೂಚನೆಗಳನ್ನು ಒಳಗೊಂಡ ಸುರಕ್ಷತಾ ಫಲಕಗಳನ್ನು ಅಳವಡಿಸುವಂತೆ ಅವರು ನಿರ್ದೇಶನ ನೀಡಿದರು.

ಅದೇ ವೇಳೆ, ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದ್ದು, ವಾಹನ ಸವಾರರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಪಘಾತಗಳನ್ನು ತಡೆಗಟ್ಟಲು ರಸ್ತೆ ಸುರಕ್ಷತಾ ಕ್ರಮಗಳು, ವಾಹನ ಸವಾರರ ಜವಾಬ್ದಾರಿ ಹಾಗೂ ಸಾರ್ವಜನಿಕರ ಸಹಕಾರ ಅತ್ಯಂತ ಮುಖ್ಯವಾಗಿದ್ದು, ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments