ಮುದ್ದೇಬಿಹಾಳ: ಪಟ್ಟಣದ ಹುಡ್ಕೋ ಹಿಂಭಾಗ ಹೋಳ್ಕರ್ ಕಾಲೋನಿಯಲ್ಲಿರುವ ಅಹಲ್ಯಾದೇವಿ ಹೋಳ್ಕರ್ ಸಮೂಹ ಶಿಕ್ಷಣ ಸಂಸ್ಥೆಯ ಅಭ್ಯುದಯ ಸೈನ್ಸ್ ಪಿಯು ಕಾಲೇಜು ವಿದ್ಯಾರ್ಥಿ ಶ್ರೀರಾಮ ವಡ್ಡರ ಜೆಇಇ ಮೇನ್ಸ್ ಪರೀಕ್ಷೆಯನ್ನು ಪಾಸ್ ಮಾಡುವ ಮೂಲಕ ಕಾಲೇಜಿಗೆ ಮತ್ತು ಸಂಸ್ಥೆಗೆ ಕೀರ್ತಿ ತಂದಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಗಳಾದ ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ, ನಿರ್ದೇಶಕ ಕಿರಣ್ ಮದರಿ, ಸಂಸ್ಥೆಯ ಲೆಕ್ಕ ಪರಿಶೋಧಕರಾದ ಬಸವರಾಜ ಬಿಜ್ಜೂರ, ಪ್ರಾಂಶುಪಾಲರಾದ ಚಂದ್ರು ಧನ್ನೂರ, ಉಪನ್ಯಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ.

