Sunday, August 16, 2026
HomeUncategorizedಲಯನ್ಸ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಲಯನ್ಸ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

“ಹಸಿರು ಭೂಮಿ – ಸುಂದರ ಭವಿಷ್ಯ: ಲಯನ್ಸ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅದ್ದೂರಿ ಆಚರಣೆ”
ನಗರದ ಪ್ರತಿಷ್ಠಿತ ಲಯನ್ಸ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ, ಹಸಿರು ಅಭಿವೃದ್ಧಿ ಹಾಗೂ ಸುಸ್ಥಿರ ಜೀವನಶೈಲಿಯ ಕುರಿತು ವಿದ್ಯಾರ್ಥಿಗಳಿಗೆ ವಿಶೇಷ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರದ ಖ್ಯಾತ ವೈದ್ಯರು ಹಾಗೂ ಲಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಪ್ಪ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಆಡಳಿತಾಧಿಕಾರಿ ಚಂದ್ರೇಗೌಡ ಪೊಲೀಸ್ ಪಾಟೀಲ್ ಅವರು ಪರಿಸರದ ಮಹತ್ವವನ್ನು ವಿವರಿಸಿ, ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಸಂರಕ್ಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಂಸ್ಥೆಯ ಮುಖ್ಯಗುರುಗಳಾದ ಶ್ರೀ ಜಗನ್ನಾಥ್ ಸರ್ ಅವರು ಮಾತನಾಡಿ, ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಆಚರಣೆಯಾಗದೇ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ತಿಳಿಸಿದರು. ಗುರುಪಾದಯ್ಯ, ವಿರೂಪಾಕ್ಷಗೌಡ, ಆಂಜನೇಯ ಮಟ್ಟೂರು, ತಿಮ್ಮಣ್ಣ, ಸಿದ್ದಲಿಂಗಪ್ಪ, ಯಮನೂರರಪ್ಪ, ಕನಕಪ್ಪ, ಉಲ್ಲಾಸರೆಡ್ಡಿ, ಶಕುಂತಲಾ ಮೇಡಂ, ಬುಡ್ಡಮ್ಮ, ಮಂಜುಳಾ, ಅಕ್ಕಮಹಾದೇವಿ ಹಾಗೂ ಶರಣಮ್ಮ ಸೇರಿದಂತೆ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ Dr.Chandrappa. “ಭೂಮಿ ನಮ್ಮ ಪೂರ್ವಜರಿಂದ ಬಂದ ಆಸ್ತಿಯಲ್ಲ; ಅದು ನಮ್ಮ ಮುಂದಿನ ಪೀಳಿಗೆಯಿಂದ ಪಡೆದ ಸಾಲವಾಗಿದೆ. ಆದ್ದರಿಂದ ಪ್ರಕೃತಿಯ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ” ಎಂದು ಹೇಳಿದರು. ಅರಣ್ಯ ನಾಶ, ಪ್ಲಾಸ್ಟಿಕ್ ಮಾಲಿನ್ಯ, ಜಲಸಂರಕ್ಷಣೆ, ವಾಯುಮಾಲಿನ್ಯ ನಿಯಂತ್ರಣ ಮತ್ತು ಜೀವ ವೈವಿಧ್ಯದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಸ್ವೀಕರಿಸಿ, ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ಅವುಗಳ ಆರೈಕೆ ಮಾಡುವ ಸಂಕಲ್ಪ ಮಾಡಿದರು. ಕಾರ್ಯಕ್ರಮದಲ್ಲಿ ಹಸಿರು ಪರಿಸರ ನಿರ್ಮಾಣಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.
“ಪರಿಸರ ಉಳಿದರೆ ಬದುಕು ಉಳಿಯುತ್ತದೆ; ಹಸಿರು ಬೆಳೆದರೆ ಭವಿಷ್ಯ ಬೆಳಗುತ್ತದೆ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ವರದಿ -ವಿಠ್ಠಲ್. ಮಟ್ಟೂರು

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments