Thursday, October 15, 2026
Homeನಿಮ್ಮ ಜಿಲ್ಲೆಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ 10 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಅಧ್ಯಕ್ಷೆ ಶಿವಲೀಲಾ...

ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ 10 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ ಭೂಮಿಪೂಜೆ

ಅಥಣಿ ಪಟ್ಟಣದ ಎಲ್ಲ ವಾರ್ಡ್‌ಗಳ ಅಭಿವೃದ್ಧಿಗೆ ಪುರಸಭೆ ಆದ್ಯತೆ — ದತ್ತಾ ವಾಸ್ಟರ್

ಅಥಣಿ: ತಾಲೂಕಿನ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಪುರಸಭೆಯ ಅನುದಾನದಡಿ ಸುಮಾರು 10 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಿಸಿ ರಸ್ತೆ ಕಾಮಗಾರಿಗೆ ಪುರಸಭೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ ಅವರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪುರಸಭೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ ಅವರು, “ಶ್ರೀ ಸಿದ್ದೇಶ್ವರ ದೇವಸ್ಥಾನವು ಅಥಣಿ ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿದ್ದು, ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಪಡೆದು ಆಶೀರ್ವಾದ ಪಡೆಯಲು ಇಲ್ಲಿಗೆ ಆಗಮಿಸುತ್ತಾರೆ. ದೇವಸ್ಥಾನದ ಆವರಣದಲ್ಲಿ ಸಿಸಿ ರಸ್ತೆ ನಿರ್ಮಾಣವಾಗುವುದರಿಂದ ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಸಾರ್ವಜನಿಕರ ಅಗತ್ಯಗಳಿಗೆ ಸ್ಪಂದಿಸುವುದು ಮತ್ತು ಪಟ್ಟಣದ ವಿವಿಧ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಪುರಸಭೆಯ ಆದ್ಯತೆಯಾಗಿದೆ. ಮುಂದಿನ ದಿನಗಳಲ್ಲಿಯೂ ಸಾರ್ವಜನಿಕರ ಹಿತದೃಷ್ಟಿಯಿಂದ ಅಗತ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು” ಎಂದು ತಿಳಿಸಿದರು.

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್ ಮಾತನಾಡಿ, “ಶ್ರೀ ಸಿದ್ದೇಶ್ವರ ದೇವಸ್ಥಾನವು ಜನರ ಧಾರ್ಮಿಕ ನಂಬಿಕೆ ಹಾಗೂ ಭಕ್ತಿಯ ಪ್ರಮುಖ ಕೇಂದ್ರವಾಗಿದೆ. ದೇವಸ್ಥಾನದ ಆವರಣದಲ್ಲಿ ಸಿಸಿ ರಸ್ತೆ ನಿರ್ಮಾಣವಾಗುವುದರಿಂದ ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಸಹಕಾರ ಸಚಿವ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು ಅಥಣಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ತಂದು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದಾರೆ. ಪುರಸಭೆ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿಯೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ, ಸಮಾನವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪುರಸಭೆ ಉಪಾಧ್ಯಕ್ಷೆ ಭುವನೇಶ್ವರಿ ಯಂಕಚ್ಚಿ, ಮುಖಂಡ ಸದಾಶಿವ ಬೂಟಾಳಿ, ಶಿವಾನಂದ ದಿವಾನಮಳ, ದಿಲೀಪ ಲೋಣಾರೆ,, ಸಯ್ಯದ ಅಮೀನ ಗದ್ಯಾಳ,ಕಲ್ಲೇಶ ಮಡ್ಡಿ, ಮಲ್ಲು ಹುದ್ದಾರ, ರಿಯಾಜ ಸನದಿ, ಪ್ರಮೋದ ಬಿಳ್ಳೂರ, ತಿಪ್ಪಣ್ಣ ಭಜಂತ್ರಿ, ಮಲ್ಲಿಕಾರ್ಜುನ ಬೂಟಾಳಿ, ರಾಜು ಬುಲ್ಬುಲೆ,ವಿನಾಯಕ ದೇಸಾಯಿ, ಬಸವರಾಜ ಪಾಟೀಲ, ರವಿ ಬಡಕಂಬಿ , ಗಿರೀಶ್ ದಿವಾನಮಳ,ಆಶಿಫ್ ತಾಂಬೊಳಿ ಹಾಗೂ ಮಂಜು ಹೋಳಿಕಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments